ದೈನಂದಿನ ಅಪರಾದ ವರದಿ.
ದಿನಾಂಕ 19.02.2014 ರ 16:00 ಗಂಟೆ ವರೆಗಿನ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವರದಿಯಾದ ಪ್ರಕರಣಗಳು ಈ ಕೆಳಗಿನಂತಿದೆ.
ಕೊಲೆ ಪ್ರಕರಣ | : | 0 |
ಕೊಲೆ ಯತ್ನ | : | 0 |
ದರೋಡೆ ಪ್ರಕರಣ | : | 0 |
ಸುಲಿಗೆ ಪ್ರಕರಣ | : | 0 |
ಹಲ್ಲೆ ಪ್ರಕರಣ | : | 0 |
ಮನೆ ಕಳವು ಪ್ರಕರಣ | : | 0 |
ಸಾಮಾನ್ಯ ಕಳವು | : | 0 |
ವಾಹನ ಕಳವು | : | 0 |
ಮಹಿಳೆಯ ಮೇಲಿನ ಪ್ರಕರಣ | : | 0 |
ರಸ್ತೆ ಅಪಘಾತ ಪ್ರಕರಣ | : | 3 |
ವಂಚನೆ ಪ್ರಕರಣ | : | 0 |
ಮನುಷ್ಯ ಕಾಣೆ ಪ್ರಕರಣ | : | 0 |
ಇತರ ಪ್ರಕರಣ | : | 1 |
1.ಕೊಣಾಜೆ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ 17.02.2014 ರಂದು ಫಿರ್ಯಾದಿದಾರರಾದ ಶ್ರೀ ಲೋಕೇಶ್ ಸುನಾರ್ ರವರು ತನ್ನ ತಮ್ಮ ಗೋವಿಂದ್ರ ಸುನಾರ್ರವರ ಜೊತೆ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಕಡೆಯಿಂದ ತಾವು ಕೆಲಸ ಮಾಡುತ್ತಿದ್ದ ಡ್ಯಾನಿಶ್ ಹೋಟೆಲ್ ಕಡೆಗೆ ರಸ್ತೆಯ ತೀರಾ ಎಡಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಮದ್ಯಾಹ್ನ ಸುಮಾರು 12:00 ಗಂಟೆ ವೇಳೆಗೆ ಮಂಗಳೂರು ತಾಲೂಕು ಬೆಳ್ಮ ಗ್ರಾಮದ ದೇರಳಕಟ್ಟೆ, ಫಾದರ್ ಮುಲ್ಲರ್ಸ್ ಹೋಮಿಯೋಪಥಿಕ್ ಆಸ್ಪತ್ರೆಯ ಜಂಕ್ಷನ್ ಬಳಿ ತಲುಪಿದಾಗ ಕುತ್ತಾರ್ ಕಡೆಯಿಂದ ಮುಡಿಪು ಕಡೆಗೆ ಅದರ ಚಾಲಕ ಸತೀಶ್ ಎಂಬಾತನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಎಡಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಫಿರ್ಯಾದಿದಾರರಿಗೆ ಢಿಕ್ಕಿ ಹೊಡೆದ ಪರಿಣಾಮ ಫಿರ್ಯಾದಿದಾರರು ರಸ್ತೆಗೆ ಬಿದ್ದು, ಅವರ ಬಲಕಾಲು ಜಜ್ಜಿ ಹೋಗಿದ್ದು, ಮೂಳೆ ಮುರಿತದ ಗಾಯವಾಗಿರುತ್ತದೆ. ಅಲ್ಲದೇ ಎಡಕಾಲಿನ ಪಾದಕ್ಕೆ ಮತ್ತು ಹಣೆಗೆ ಗುದ್ದಿದ ಗಾಯವಾಗಿರುತ್ತದೆ. ಗಾಯಾಳು ಫಿರ್ಯಾದಿದಾರರನ್ನು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ಬಗ್ಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು ಮಾಡಿರುತ್ತಾರೆ.
2.ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ: 18-02-2014 ರಂದು 19-00 ಗಂಟೆಗೆ ಕರಿಂಜೆ ಗ್ರಾಮದ ಗಾಣದಬೆಟ್ಟು ಎಂಬಲ್ಲಿ ಭಾಸ್ಕರ್ ಶೆಟ್ಟಿ ಎಂಬವರ ಮನೆಯ ಬಳಿ ಜುಗಾರಿ ಆಟ ನಡೆಯುತ್ತಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ 19-30 ಗಂಟೆಗೆ ಮೂಡಬಿದ್ರೆ ಠಾಣೆಯ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಅನಂತ ಪದ್ಮನಾಭ ರವರು ಸಿಬ್ಬಂದಿಯವರ ಜೊತೆಯಲ್ಲಿ ದಾಳಿ ಮಾಡಿದಲ್ಲಿ ಉಲಾಯಿ - ಪಿದಾಯಿ ಎಂಬ ಜುಗಾರಿ ಆಟಕ್ಕೆ ನಿರತರಾಗಿದ್ದ 8 ಮಂದಿ ಆರೋಪಿಗಳಾದ ಭಾಸ್ಕರ್ ಶೆಟ್ಟಿ, ವಿಜಯ ಶೆಟ್ಟಿ, ಗೋಪಾಲ, ನಝೀರ್, ಮೊಹಮ್ಮದ್, ಸಲೀಮ್, ಬಸವ ಮತ್ತು ಮೊಹಮ್ಮದ್ ಎಂಬವರನ್ನು ವಶಕ್ಕೆ ಪಡೆದುಕೊಂಡು ಆಟಕ್ಕೆ ಉಪಯೋಗಿಸಿದ ಪ್ಲಾಸ್ಟಿಕ್ ಚಾಪೆ – 1, ಬೆಡ್ ಶೀಟ್ -1 ಚಾರ್ಜರ್ ಲೈಟ್ -1 ಮತ್ತು 52 ಇಸ್ಪೀಟ್ ಎಲೆಗಳು, ಆಟ ಆಡಲು ಉಪಯೋಗಿಸಿದ ಒಟ್ಟು ರೂ 8,350 /- ಸ್ವಾದೀನ ಪಡಿಸಿಕೊಂಡಿರುವುದಾಗಿದೆ.
3.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ 17-02-2014 ರಂದು 18-00 ಗಂಟೆಗೆ ಪಿರ್ಯಾದುದಾರರಾದ ಶ್ರೀಮತಿ ಫ್ಲೆವಿ ಪೆರಾವೋ ರವರು ರಾ.ಹೆ. 66 ರ ತೊಕ್ಕೊಟ್ಟು ಜಂಕ್ಷನ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರ ಹಿಂದಿನಿಂದ KA 19 EH 5544 ನೇ ನಂಬ್ರ ಮೋಟಾರು ಸೈಕಲನ್ನು ಅದರ ಸವಾರ ಅತೀವೇಗ ಹಾಗು ತೀರಾ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಡಿಕ್ಕಿ ಹೊಡೆದುದರಿಂದ ರಸ್ತೆಗೆ ಬಿದ್ದ ಪಿರ್ಯಾದುದಾರರ ಎಡಕೈಗೆ ತೀವ್ರ ಸ್ವರೂಪದ ಗಾಯವಾಗಿರುತ್ತದೆ. ಗಾಯಾಳು ಪಿರ್ಯಾದುದಾರರು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲುಗೊಂಡು ಚಿಕಿತ್ಸೆಯಲ್ಲಿರುತ್ತಾರೆ.
4.ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ: 17.02.2014 ರಂದು ಸಂಜೆ ಸುಮಾರು 5.30 ಗಂಟೆಗೆ ಪಿರ್ಯಾದಿದಾರರಾದ ಶ್ರೀ ರವಿಕುಮಾರ್ ರವರು ತನ್ನ ಬಾಬ್ತು ಕೆಎ-19-ಇಡಿ-637 ನೇ ಮೋಟಾರ್ ಸೈಕಲ್ನಲ್ಲಿ ಗಂಜಿಮಠ ಕಡೆಯಿಂದ ವಾಮಂಜೂರು ಕಡೆಗೆ ಬರುತ್ತಾ ಗುರುಪುರ ನದಿಯ ಸೇತುವೆ ದಾಟಿ ಸ್ವಲ್ಪ ಮುಂದೆ ತಲುಪಿದಾಗ ಮಂಗಳೂರು ಕಡೆಯಿಂದ ಗುರುಪುರ ಕಡೆಗೆ ಕೆಎ-19-ಡಿ-5202 ನೇ ಬಸ್ಸನ್ನು ಆದರ ಚಾಲಕ ಮಂಜುನಾಥ್ ಎಂಬವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಬೈಕಿಗೆ ಎಡಕಾಲಿಗೆ ಡಿಕ್ಕಿಹೊಡೆದ ಪರಿಣಾಮ ಪಿರ್ಯಾದಿದಾರರು ಬೈಕ್ ಸಮೇತ ರಸ್ತೆಗೆ ಬಿದ್ದು ಅವರ ಎಡಕಾಲಿಗೆ ತೀವ್ರ ಸ್ವರೂಪದ ಮೂಳೆ ಮುರಿತದ ಜಖಂ ಮತ್ತು ಎದೆಗೆ ಗುದ್ದಿದ ನೋವುಂಟಾಗಿ ಚಿಕಿತ್ಸೆ ಬಗ್ಗೆ SCS ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ.
No comments:
Post a Comment