ನಂಬ್ರ: ಸಿ.ಆರ್.ಎಂ(ಸಂಚಾರ)/10 /ಸಿಓಪಿ/2015 ಪೊಲೀಸು ಆಯುಕ್ತರ ಕಚೇರಿ
ಮಂಗಳೂರು ನಗರ
ದಿನಾಂಕ: 26-03-2015.
ಅಧಿಸೂಚನೆ
ದಿನಾಂಕ: 27-03-2015 ರಂದು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ವಜುಭಾಯಿ ರುಢಾವಾಲಾರವರು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿ ಬಳಿಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾರ್ಯಕ್ರಮ ಸ್ಥಳದಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಂಚಾರ ಸುವ್ಯವಸ್ಥೆ ಬಂದೋಬಸ್ತ್ ನಿರ್ವಹಣೆಯ ಬಗ್ಗೆ ವಾಹನ ಸಂಚಾರದಲ್ಲಿ ಮಾರ್ಪಾಡುಗಳನ್ನು ಮಾಡಬೇಕಾಗಿರುವುದರಿಂದ ವಿ.ಐ.ಪಿ ರವರು ಸಂಚರಿಸುವ ರಸ್ತೆಗಳಲ್ಲಿ ವಾಹನ ನಿಲುಗಡೆ ಮತ್ತು ಸಂಚಾರವನ್ನು ನಿರ್ಬಂಧಿಸಿ ವಾಹನಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಸೂಚಿಸಿ ಸೂಕ್ತ ಅಧಿಸೂಚನೆ ಹೊರಡಿಸುವಂತೆ ಸಹಾಯಕ ಪೊಲೀಸ್ ಆಯುಕ್ತರು, ಸಂಚಾರ ಉಪ ವಿಭಾಗ, ಮಂಗಳೂರು ನಗರ ಇವರು ಕೋರಿರುತ್ತಾರೆ.
ಅಂತೆಯೇ ಇವರ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಗೌರವಾನ್ವಿತ ರಾಜ್ಯಪಾಲರ ಆಗಮನದ ವೇಳೆ ವಾಹನಗಳ ಸುಗಮ ಸಂಚಾರದ ಹಿತದೃಷ್ಠಿಯಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಆದ್ದರಿಂದ ಎಸ್. ಮುರುಗನ್, ಪೊಲೀಸ್ ಆಯುಕ್ತರು ಹಾಗೂ ಅಡಿಷನಲ್ ಡಿಸ್ಟ್ರಿಕ್ಟ್ ಮೆಜಿಸ್ಟ್ರೇಟ್, ಮಂಗಳೂರು ನಗರ ಆದ ನಾನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ನಿಯಮ 221 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ 27-03-2015 ರಂದು ಅಪರಾಹ್ನ ಬೆಳಿಗ್ಗೆ 8-00 ಗಂಟೆಯಿಂದ ವಿ.ಐ.ಪಿ ರವರು ಕಾರ್ಯಕ್ರಮ ಮುಗಿಸಿ ವಾಪಸ್ಸು ತೆರಳುವ ತನಕ ಜ್ಯಾರಿಯಲ್ಲಿರುವಂತೆ ಈ ಕೆಳಗೆ ಸೂಚಿಸಿರುವಂತೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ ಆದೇಶಿಸಿರುತ್ತೇನೆ.
1) ಮಾನ್ಯ ರಾಜ್ಯಪಾಲರು ಮಂಗಳೂರು ವಿಮಾನ ನಿಲ್ದಾಣದಿಂದ ಕಾವೂರು-ಬೊಂದೇಲ್-ಪದವಿನಂಗಡಿ-ಸರ್ಕ್ಯೂಟ್ ಹೌಸ್-ಬಟ್ಟಗುಡ್ಡೆ-ಕದ್ರಿ, ಕಂಬಳ ಬಂಟ್ಸ್ ಹಾಸ್ಟೆಲ್-ಕರಂಗಲಪಾಡಿ-ಪಿವಿಎಸ್-ನವಭಾರತ-ಹೋಟೆಲ್ ಓಷಿಯನ್ ಪರ್ಲ್ ವರೆಗೆ ಬಂದು-ಹೋಗುವ ಸಮಯದಲ್ಲಿ ಸಂಚರಿಸುವ ಮಾರ್ಗದಲ್ಲಿನ ಅಡ್ಡರಸ್ತೆಗಳಿಂದ ಹಾಗೂ ಎದುರಿನಿಂದ ಯಾವುದೇ ವಾಹನಗಳು ಬಾರದಂತೆ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ತರಹದ ವಾಹನಗಳ ಅನಾವಶ್ಯಕ ನಿಲುಗಡೆಯನ್ನು ನಿಷೇಧಿಸಲಾಗಿದೆ.
2) ದಿನಾಂಕ: 27-03-2015 ರಂದು ಬೆಳಿಗ್ಗೆ 8.00 ಗಂಟೆಯಿಂದ ವಿ.ಐ.ಪಿ ರವರು ನಿರ್ಗಮಿಸುವ ವರೆಗೆ ನಗರದ ಸರ್ಕ್ಯುಟ್ ಹೌಸ್ ಆವರಣದಲ್ಲಿ ಅನಾವಶ್ಯಕವಾದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
3) ರಾಷ್ಟ್ರೀಯ ಹೆದ್ಧಾರಿಯಲ್ಲಿಯೂ ವಿ.ಐ.ಪಿ ರವರು ಬಂದು ಹೋಗುವ ಸಮಯದಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
''ಮೇಲಿನ ಈ ನಿರ್ಬಂದನೆಗಳು ವಿ.ಐ.ಪಿ ವಾಹನಗಳು, ಪೊಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.''
ಈ ಆದೇಶದನ್ವಯ ಸದ್ರಿ ರಸ್ತೆಯಲ್ಲಿ ಅವಶ್ಯವುಳ್ಳ ಸೂಕ್ತ ಮಾರ್ಕಿಂಗ್ ಮತ್ತು ಸೂಚನಾ ಫಲಕಗಳನ್ನು ಅಳವಡಿಸಲು ಹಾಗೂ ಸಂಚಾರ ನಿಯಂತ್ರಣ ಕರ್ತವ್ಯಕ್ಕೆ ಸಿಬ್ಬಂದಿಗಳನ್ನು ನೇಮಕಗೊಳಿಸಲು ಸಹಾಯಕ ಪೊಲೀಸು ಆಯುಕ್ತರು, ಮಂಗಳೂರು ಸಂಚಾರ ಉಪ ವಿಭಾಗ, ಮಂಗಳೂರು ನಗರ ಇವರು ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 166 ರ ಪ್ರಕಾರ ಅಧಿಕಾರವುಳ್ಳವರಾಗಿರುತ್ತಾರೆ.
ಈ ಅಧಿಸೂಚನೆಯನ್ನು ದಿನಾಂಕ: 26 -03-2015 ರಂದು ನನ್ನ ಸ್ವ ಹಸ್ತ ಸಹಿ ಹಾಗೂ ಮುದ್ರೆಯೊಂದಿಗೆ ಹೊರಡಿಸಿರುತ್ತೇನೆ.
ಸಹಿ/-
(ಎಸ್. ಮುರುಗನ್)
ಪೊಲೀಸು ಆಯುಕ್ತರು ಹಾಗೂ ಅಡಿಷನಲ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್
ಮಂಗಳೂರು ನಗರ
rose day gift
ReplyDeletered rose day
7 feb rose day
rose day greetings
world rose day
date of rose day
rose day cards
valentines day rose
valentine rose day
rose day msgs
national rose day
rose day wallpapers
rose day photos
rose day photo
rose day flowers