Thursday, April 2, 2015

Daily Crime Reports : 02-04-2015

ದೈನಂದಿನ ಅಪರಾದ ವರದಿ.
ದಿನಾಂಕ 02.04.201510:00  ಗಂಟೆ  ವರೆಗಿನ ಮಂಗಳೂರು ನಗರ  ಪೊಲೀಸ್‌ ಕಮೀಷನರೇಟ್‌  ವ್ಯಾಪ್ತಿಯಲ್ಲಿ  ವರದಿಯಾದ ಪ್ರಕರಣಗಳು    ಕೆಳಗಿನಂತಿದೆ.
 
ಕೊಲೆ  ಪ್ರಕರಣ
:
0
ಕೊಲೆ  ಯತ್ನ
:
0
ದರೋಡೆ ಪ್ರಕರಣ
:
0
ಸುಲಿಗೆ ಪ್ರಕರಣ
:
0
ಹಲ್ಲೆ ಪ್ರಕರಣ   
:
0
ಮನೆ ಕಳವು ಪ್ರಕರಣ
:
0
ಸಾಮಾನ್ಯ ಕಳವು
:
0
ವಾಹನ ಕಳವು
:
0
ಮಹಿಳೆಯ ಮೇಲಿನ ಪ್ರಕರಣ
:
0
ರಸ್ತೆ ಅಪಘಾತ  ಪ್ರಕರಣ
:
1
ವಂಚನೆ ಪ್ರಕರಣ        
:
0
ಮನುಷ್ಯ ಕಾಣೆ ಪ್ರಕರಣ
:
0
ಇತರ ಪ್ರಕರಣ
:
1
 
 
 
 
 
 
 
 
 
 
 
 
 
 
 
 
 
 
 
 
 
 
 
 
 
1.ಮುಲ್ಕಿ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ 01-04-2015 ರಂದು ಸಂಜೆ ಮುಲ್ಕಿ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ರಾಮಚಂದ್ರ ನಾಯಕ್ ರವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಟ್ಕಾ ಜೂಜಾಟದ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಂಚರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ನಾಗಬನದ ಬಳಿಗೆ ತೆರಳಿ ಮಟ್ಕಾ ಜೂಜಾಟ ನಡೆಯುತ್ತಿದ್ದಲ್ಲಿಗೆ 18-30 ಗಂಟೆ ಸಮಯಕ್ಕೆ ಧಾಳಿ ನಡೆಸಿ, ಸಾರ್ವಜನಿಕರಿಂದ ಮಟ್ಕಾ ಜೂಜಾಟಕ್ಕೆ ಹಣ ಸಂಗ್ರಹಿಸುತ್ತಿದ್ದ ನವೀನ್ ಪ್ರಾಯ: 24 ವರ್ಷ ತಂದೆ: ರಾಜರಾಮ ಪೂಜಾರಿ, ವಾಸ: ಶ್ರೀ ದೇವಿ ನಲಯ, ಲಿಂಗಪ್ಪಯ್ಯಕಾಡು, ಕಾರ್ನಾಡು ಗ್ರಾಮ, ಮಂಗಳೂರು ತಾಲೂಕು ಎಂಬಾತನನ್ನು ವಶಕ್ಕೆ ಪಡೆದುಕೊಂಡು , ಆತನಿಂದ ಮಟ್ಕಾ ಜೂಜಾಟಕ್ಕೆ ಬಳಸಿದ್ದ ಮಟ್ಕಾ ನಂಬರ್ ಬರೆದ ಚೀಟಿ-1 ,  ಪೆನ್ನು-1, ಮತ್ತು ರೂ 1,560/- ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿ ನವೀನನ್ನು ವಿಚಾರಿಸಿದಲ್ಲಿ ಆತನು ಜೂಟಾಟಕ್ಕೆ ಹಣ ಸಂಗ್ರಹಿಸಿ ಕಾರ್ನಾಡು ಬೈಪಾಸಿನ ರಮೇಶ್ ಎಂಬಾತನ ಮೂಲಕ ಉಡುಪಿಯ ಲಿಯೋ ಎಂಬಾತನಿಗೆ ನೀಡುವುದಾಗಿ  ತಿಳಿಸಿರುತ್ತಾನೆ. ಅದರಂತೆ ಆರೋಪಿ ಮತ್ತು ಸ್ವಾಧೀನಪಡಿಸಿಕೊಂಡ ಸೊತ್ತುಗಳ ಸಮೇತ ಠಾಣೆಗೆ ಬಂದು ಪ್ರಕರಣ ದಾಖಲಿಸಿರುವುದಾಗಿದೆ.
 
2.ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ 01.04.2015 ರಂದು ಸಮಯ ಸುಮಾರು ಮದ್ಯಾಹ್ನ 12.15 ಗಂಟೆಗೆ ಫಿರ್ಯಾದುದಾರರಾದ ಶ್ರೀ ಎಂ. ನಾರಾಯಣ ರವರ ಅಣ್ಣ ಬಾಬುರಾವ್ ರವರು ಸ್ಕೂಟರ್ ನಂಬ್ರ KA05-EP-5064  ರಲ್ಲಿ ಸವಾರಾಗಿದ್ದುಕೊಂಡು ಮಂಗಳಾದೇವಿ ಬಳಿಯ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪಿನ ಕಡೆಯಿಂದ ಮಂಗಳಾದೇವಿ ಕಡೆಗೆ ಹೋಗುವರೇ ಮಂಗಳಾದೇವಿ ಕಡೆಯಿಂದ ಮೋಟಾರ್ ಸೈಕಲ್ ನಂಬ್ರ KA19-U-3890   ಸವಾರ ಹಿಂಭದಿಯಲ್ಲಿ ಇಬ್ಬರೂ ಸಹ ಸವಾರರನ್ನು ಕುಳ್ಳಿರಿಸಿಕೊಂಡು ಅತೀ ವೇಗ ಮತ್ತು ಅಜಾಗರೂಕತೆಯಿಂದ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದು   ಡಿಕ್ಕಿ ಮಾಡಿದ ಪರಿಣಾಮ ಬಾಬುರಾವ್ ರವರು ಸ್ಕೂಟರ್ ಸಮೇತ ರಸ್ತೆಗ ಬಿದ್ದು ತಲೆಗೆ  ಹಾಗೂ ಮುಖಕ್ಕೆ ಗಂಬೀರ ಸ್ವರೋಪದ ಗಾಯವುಂಟಾಗಿ  ಕೆ ಎಂಸಿ ಆಸ್ಪತ್ರೆ ಅಂಬೇಡ್ಕರ್ ನಲ್ಲಿ  ಪ್ರಜ್ಞಾಹೀನ ಸ್ಥಿತಿಯಲ್ಲಿ ಒಳರೋಗಿಯಾಗಿ ದಾಖಾಲಾಗಿರುತ್ತಾರೆ ಮತ್ತು  ಮೋಟಾರ್ ಸೈಕಲ್ ನಲ್ಲಿದ್ದ ಮೂವರಿಗೂ ಗಾಯಗಳಾಗಿರುತ್ತದೆ.
 

1 comment: